



ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣವನ್ನು ಸಂವರ್ಧನಗೊಳಿಸುವುದಕ್ಕೆ ಹಣಕಾಸು ನೆರವು ಒದಗಿಸಲು ಮತ್ತು ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಒಂದು ನಿಧಿಯನ್ನು, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ಅಧಿನಿಯಮ, 1965 ಅಡಿಯಲ್ಲಿ ಸ್ಥಾಪಿಸಲಾಗಿದೆ. ಮಂಡಳಿಗೆ ವಂತಿಗೆ ಪಾವತಿಸುವ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಸಂಘಟಿತ ಕಾರ್ಮಿಕರು ಮತ್ತು, ಅವರ ಕುಟುಂಬದ ಅವಲಂಬಿತರ ಕ್ಷೇಮಾಭಿವೃದ್ಧಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಯೋಜನೆಗಳು ಜಾರಿಯಲ್ಲಿರುತ್ತದೆ.
ಸೂಚನೆ: ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ವರ್ಷ ಜನವರಿ 15 ರೊಳಗೆ ಕಾರ್ಮಿಕರು, ಮಾಲೀಕರು ರೂ.20:40 ಅನುಪಾತದಲ್ಲಿ ಒಬ್ಬ ಕಾರ್ಮಿಕನಿಗೆ ಒಟ್ಟು ರೂ. 60/- ಗಳಂತೆ ವಂತಿಕೆಯನ್ನು ಕಾರ್ಮಿಕ ಕಲ್ಯಾಣ ನಿಧಿಗೆ ಪಾವತಿಸತಕ್ಕದ್ದು.
2020-21ರ ಅಂಕಿಅಂಶಗಳು
2015-16 ನೇ ಸಾಲಿನಿಂದ 2019-20 ನೇ ಸಾಲಿನವರೆಗೆ ಕಲ್ಯಾಣ ಯೋಜನೆಗಳಡಿ ಸಂಘಟಿತ ಕಾರ್ಮಿಕರು ಮತ್ತು ಅವರ
ಕುಟುಂಬದ ಅವಲಂಬಿತರಿಗೆ ನೀಡಿರುವ ವಿವಿಧ
ಸೌಲಭ್ಯಗಳ ವಿವರಗಳಿಗೆ ಕ್ಲಿಕ್
ಮಾಡಿ